ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲಾ ಘಟಕ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಮನೆ ಮನೆ ಕನ್ನಡ ಜಾಗೃತಿ ಅಭಿಯಾನ ಮಂಗಳೂರಿನಲ್ಲಿ ಲೋಕಾರಪಡೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಮತ್ತು ಸಾಹಿತ್ಯ ಪರಿಚಾರಕ ಡಾ ಕೊಳ್ಚಪ್ಪೆ ಗೋವಿಂದ ಭಟ್ ವಹಿಸಿದ್ದರು. ಈ ಉಪಕ್ರಮವು ಸ್ಥಳೀಯ ಸಂಘಟನಾ ಕಾರ್ಯದರ್ಶಿ ಅನಿತಾ ಶೆಣೈ ಅವರ ಕುಲಶೇಖರ ಮನೆಯಲ್ಲಿ ಸಂಚಲನ ಮೂಡಿಸಿತು.
ಈ ಅಭಿಯಾನದ ರೂವಾರಿ ಮತ್ತು ಈ ಸಂಸ್ಥೆಗಳ ಸ್ಥಾಪಕ ಸಂಚಾಲಕ ವಾಮನ ರಾವ್ ಬೇಕಲ್ ಮತ್ತು ಸಂಧ್ಯಾ ರಾಣಿ ಟೀಚರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತ "ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸ್ವಯಂ ಅಳವಡಿಸಿ, ಪರಿಸರದಲ್ಲಿ ಕನ್ನಡ ಪ್ರಜ್ಞೆ ಮೂಡಿಸುವುದೇ ಮನೆ ಮನೆ -ಕನ್ನಡ ಜಾಗೃತಿ ಅಭಿಯಾನದ ಗುರಿ " ಎಂದು ಕನ್ನಡ ನಾಡು ನುಡಿಯ ಅಭಿಮಾನ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ಒತ್ತಾಸೆ ಮಾಡಿದರು. ಆ ನಿಟ್ಟಿನಲ್ಲಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಇದರ ಅಂಗವಾಗಿ ದ.ಕ ಘಟಕದ ಅಧ್ಯಕ್ಷರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಅವರಿಗೆ ಕನ್ನಡ ಧ್ವಜವನ್ನು ನೀಡಿ ಅಭಿಯಾನಕ್ಕೆ ಶುಭ ಹಾರೈಸಿದರು. ಕನ್ನಡ ಪ್ರಜ್ಞೆ, ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಆತ್ಮಅಭಿಮಾನ ಮೋಡಿಸುವ ನಿಟ್ಟಿನಲ್ಲಿ ಕನ್ನಡ ಕಾರ್ಯಕ್ರಮಗಳನ್ನು ತಳಮಟ್ಟದಲ್ಲಿ ಸಂಘಟಿಸಿ ಕನ್ನಡ ಪ್ರಜ್ಞೆ ಮೂಡಿಸಲು ಸಂಘಟನೆ ಅಹರ್ನಿಷಿ ದುಡಿಯಲಿದೆ, ಎಂದು ಕಾರ್ಯಕ್ರಮ ದ ಅಧ್ಯಕ್ಷ ಭಾಷಣದಲ್ಲಿ ಅಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಹೇಳಿದರು.
Comments (0)
Post Comment
Report Abuse
Be the first to comment using the form below.